ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಕೂಡಾ ‘ಸೆಂಟ್ರಲ್ ವಾರ್ ರೂಮ್’ ಅನ್ನು ರಚಿಸಿದೆ. ಸಂಘಟನಾತ್ಮಕ ವಾರ್ ರೂಮ್‌ನ ಅಧ್ಯಕ್ಷರಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಯ್ಕೆ ಮಾಡಿದ್ದಾರೆ.