ಯಶವಂತಪುರದಲ್ಲಿ ಇರುವ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್) ಆವರಣದಲ್ಲಿ ಸರಕಾರಿ ಕಚೇರಿಗಳಿಗೆ ಜಾಗ ಒದಗಿಸಲು ಸುಸಜ್ಜಿತ ಸಂಕೀರ್ಣ ನಿರ್ಮಿಸಲಾಗುವುದು. ಮುಂದಿನ 100 ವರ್ಷಗಳ ಅವಧಿಗೆ ಕಾರ್ಖಾನೆಯ ವಿಸ್ತರಣೆಗೆ ಬೇಕಾದ ಜಾಗವನ್ನು ಮೀಸಲಿಟ್ಟುಕೊಂಡು ಈ ಕೆಲಸ ಕೈಗೊಳ್ಳಲಾಗುವುದು ಎಂದು ಕಾರ್ಖಾನೆ ಅಧ್ಯಕ್ಷರೂ ಆಗಿರುವ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ತಿಳಿಸಿದರು.