ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಅಥವಾ ರಾಯಭಾರಿಯನ್ನಾಗಿಸಬೇಕು ಎಂಬ ವಿಚಾರವನ್ನು ಕ್ಯಾಬಿನೆಟ್ ನಲ್ಲಿ ಇಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಈ ವಿಷಯ ಕುರಿತ ಒಕ್ಕೊರಲ ಒತ್ತಾಯವನ್ನು ನಾನು ಗೌರವಿಸುತ್ತೇನೆ. ವೈಯಕ್ತಿಕವಾಗಿ ನನಗೆ ಈ ಘೋಷಣೆ ಬಗ್ಗೆ ತಕರಾರಿಲ್ಲ ಎಂದು ಸ್ಪಷ್ಟಪಡಿಸಿದರು.