ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿದ ನಂತರ ಮುಖ್ಯಮಂತ್ರಿ ಪಟ್ಟಕ್ಕಾಗಿ ತೀವ್ರ ಪೈಪೋಟಿ ನಡೆಯುತ್ತಿದೆ. ಸಿಎಂ ಕುರ್ಚಿಗಾಗಿ ಪಟ್ಟು ಹಿಡಿದಿರುವ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಜೊತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರು ಒನ್ ಟು ಒನ್ ಸಭೆ ನಡೆಸಿ, ಇಬ್ಬರ ವಾದವನ್ನು ಆಲಿಸುತ್ತಿದ್ದಾರೆ. ಮೊದಲು ಡಿ.ಕೆ.ಶಿವಕುಮಾರ್ ಅವರೊಂದಿಗಿನ ಸಭೆ ನಡೆಸಿ, ಇದೀಗ ಖರ್ಗೆ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಭೇಟಿ ವೇಳೆ ಡಿಕೆಶಿ ಅವರು ಸಿಎಂ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದು, ಕೊಟ್ಟರೆ ಸಿಎಂ ಹುದ್ದೆ ಕೊಡಿ.