ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್​ ಹಿರಿಯ ನಾಯಕ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಜೊತೆಯಲ್ಲಿ ರಹಸ್ಯ ಸಭೆ ನಡೆಸಿದ್ದಾರೆ. ದಾವಣಗೆರೆ ಹೊರವಲಯದಲ್ಲಿರುವ ರೆಸಾರ್ಟ್​ನಲ್ಲಿ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ. ದಾವಣಗೆರೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನಡೆ ಸ್ಥಳೀಯ ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.