ತಾಲೂಕಿನ ಗುಳದಳ್ಳಿ ಹಾಗೂ ಶಿವಪುರ ಗ್ರಾಮಗಳಲ್ಲಿ ವಾಂತಿಬೇಧಿ ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಕುರಿತು ಜಿ.ಪಂ ಸಿಇಒ ರಾಹುಲ್ ರತ್ನಂ ಪಾಂಡೆ ಮನೆ ಮನೆಗೆ ಭೇಟಿ ನೀಡಿ ಗ್ರಾಮಸ್ಥರ ಆರೋಗ್ಯ ವಿಚಾರಿಸಿ ಆರೋಗ್ಯದ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ನೀಡಿದರು.
ಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರಿನ ಅನಾಹುತ ಮರು ಕಳಿಸಿದರೆ ನೇರವಾಗಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳನ್ನು ಹೊಣೆ ಮಾಡಿ ಅಮಾನತುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಡೆಯ ಎಚ್ಚರಿಕೆ ನೀಡಿದರು.ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿದ ವೇಳೆ ಈ ಎಚ್ಚರಿಕೆ ನೀಡಿದರು.
Your experience on this site will be improved by allowing cookies.